ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕು ವ್ಯಾಪ್ತಿಯ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ತೊಂದರೆ ಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ವಿವಿದೆಡೆ 50 ಕೋಟಿ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿಯ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ.ಸಿ.ಸುಧಾಕರ್ ತಿಳಿಸಿದರು. ತಾಲೂಕಿನ ಮುರುಗಮಲ್ಲ ಗ್ರಾಮದ ಪರಿಮಿತಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನ ಗ್ರಾಮಗಳ ಪರಿಮಿತಿಯ ಬೀದಿಗಳಿಗೆ ಕಾಂಕ್ರಿಟ್ ರಸ್ತೆ ಹಾಗೂ ಆರ್.ಆರ್.ಸಿ ಚರಂಡಿ […]