ಲಾಸ್ ಎಂಜಲಿಸ್(ಯುಎಸ್‌ಎ): ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನದ “ದಿ ಎಲಿಫೆಂಟ್ ವಿಸ್ಪರರ್ಸ್” ಅತ್ಯುತ್ತಮ ಕಿರು ಸಾಕ್ಷ್ಯಚಿತ್ರವಾಗಿ ಹೊರಹೊಮ್ಮಿದ್ದು, ಪ್ರತಿಷ್ಟಿತ ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಈ ವಿಭಾಗದಲ್ಲಿ ಆಸ್ಕರ್ ಪಡೆದ ಭಾರತದ ಮೊದಲ ಸಾಕ್ಷ್ಯಚಿತ್ರ ಎಂಬ ಖ್ಯಾತಿಗೂ ಪಾತ್ರವಾಗಿದೆ. ಸಾಕ್ಷ್ಯಚಿತ್ರದ ಕಥಾವಸ್ತು ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದು ಅನಾಥ ಆನೆಯನ್ನು ದತ್ತು ತೆಗೆದುಕೊಳ್ಳುವ ಕುಟುಂಬದ ಸುತ್ತ ಸುತ್ತುತ್ತದೆ. ಆನೆ ಮರಿಯ ಆರೈಕೆಗಾಗಿ ತಮ್ಮ ಜೀವನ ವನ್ನೇ ಮುಡಿಪಾಗಿಟ್ಟ ದಂಪತಿಯ ಕಥೆ ಇದರಲ್ಲಿದೆ. ಆನೆಗಳು ಮತ್ತು ಅವುಗಳ ಪಾಲಕರ ನಡುವಿನ […]