ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮೇ 31 ರಿಂದ ಜೂನ್ 7 ರವರೆಗೆ ಕಠಿಣ ಲಾಕ್ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪ್ರಮಾಣ ನಿರಂತರವಾಗಿ ಕಡಿಮೆಯಾಗುತ್ತಿದ್ದರೂ, ನಿರೀಕ್ಷಿತ ವೇಗದಲ್ಲಿ ಕಡಿಮೆಯಾಗುತ್ತಿಲ್ಲ. ಲಾಕ್ಡೌನ್ ಜಾರಿಯಲ್ಲಿದ್ದರೂ, ಜನರು ಅನಗತ್ಯವಾಗಿ ಓಡಾಡುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸೋಮವಾರ 10 ಗಂಟೆಯಿಂದ ಒಂದು ವಾರ ಕಾಲ ಕಟ್ಟುನಿಟ್ಟಿನಿಂದ ಲಾಕ್ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದರು. ಈ ಅವಧಿಯಲ್ಲಿ ಔಷಧಿ […]