ಬೆಂಗಳೂರು: ನಟ ಕಿಚ್ಚ ಸುದೀಪ್ ಮಾರ್ಗದರ್ಶನದಲ್ಲಿ ಆರಂಭವಾದ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಪಂದ್ಯಾವಳಿಯ 4ನೇ ಆವೃತ್ತಿಗೆ ದಿನಗಣನೆ ಶುರುವಾಗಿದೆ. ಡಿಸೆಂಬರ್ 23, 24, 25ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟೂರ್ನಿ ನಡೆಸುವುದಾಗಿ ಸುದೀಪ್ ಘೋಷಿಸಿದ್ದಾರೆ. ಸಿನಿಮಾ, ಧಾರಾವಾಹಿ ಮತ್ತು ಮಾಧ್ಯಮ ಲೋಕದಲ್ಲಿ ಕೆಲಸ ಮಾಡುವವರ ಕ್ರಿಕೆಟ್ ಪಂದ್ಯಾವಳಿಗಾಗಿ ಕೆಸಿಸಿ ಕಪ್ ಸೀಸನ್ 4ರ ಹರಾಜು ಪ್ರಕ್ರಿಯೆ ಭಾನುವಾರ, ನ.26ರಂದು ಮುಗಿದಿದೆ. ಹೊಸಕೆರೆಹಳ್ಳಿಯ ನಂದಿಲಿಂಕ್ಸ್ ಗ್ರೌಂಡ್‌ನಲ್ಲಿ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯಿತು. ಕೆಸಿಸಿ ಹರಾಜು ಪ್ರಕ್ರಿಯೆಯಲ್ಲಿ […]