ನವದೆಹಲಿ: ದಿಬ್ರುಗಢ ಜೈಲಿನಲ್ಲಿರುವ ಖಲಿಸ್ತಾನಿ ಪರ ಹೋರಾಟಗಾರ ಹಾಗೂ ಸಂಸದ ಅಮೃತಪಾಲ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಲು ಅವರಿಗೆ ನಾಲ್ಕು ದಿನಗಳ ಪೆರೋಲ್ ನೀಡಲಾಗಿದೆ. ಜು.5 ರಂದು ಸಂಸದರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಜೈಲಿನಲ್ಲಿದ್ದುಕೊಂಡೇ ಖದೂರ್ ಸಾಹಿಬ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿ ಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಒಂಬತ್ತು ಸಹಚರರೊಂದಿಗೆ ಪ್ರಸ್ತುತ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿರುವ ‘ವಾರಿಸ್ ಪಂಜಾಬ್ ದೇ’ ಸಂಘಟನೆಯ ಮುಖ್ಯಸ್ಥರಿಗೆ ಪ್ರಮಾಣವಚನ ಸ್ವೀಕರಿಸಲು ನಾಲ್ಕು ದಿನಗಳ ಪೆರೋಲ್ ನೀಡಲಾಗಿದೆ ಎಂದು ಅಮೃತಸರದ […]