ಭೋಪಾಲ್: ರಾಮ ನವಮಿ ವೇಳೆ ಕೋಮುಗಲಭೆ ನಡೆದಿದ್ದ ಮಧ್ಯಪ್ರದೇಶದ ಖರ್ಗೋನ್‌ನಲ್ಲಿ ಸೋಮವಾರ ಹಾಗೂ ಮಂಗಳವಾರ ಕರ್ಪ್ಯೂ ಘೋಷಿಸಲಾಗಿದೆ. ಎರಡೂ ದಿನಗಳಂದು ಈದ್ ಆಚರಣೆ ನಡೆಯಲಿದ್ದು, ಸಂಪೂರ್ಣ ಕರ್ಪ್ಯೂ ಜಾರಿ ಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ‘ಮೇ 2 ಮತ್ತು ಮೇ 3 ರಂದು ಖರ್ಗೋನ್‌ನಲ್ಲಿ ಸಂಪೂರ್ಣ ಕರ್ಫ್ಯೂ ವಿಧಿಸಲಾಗುವುದು. ಈದ್ ಪ್ರಾರ್ಥನೆಗಳನ್ನು ಮನೆ ಯಲ್ಲಿಯೇ ಸಲ್ಲಿಸಬೇಕು’ ಎಂದು ಖರ್ಗೋನ್ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ. ಅಂಗಡಿಗಳು ತೆರೆದಿರುತ್ತವೆ ಮತ್ತು ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಪಾಸ್ ನೀಡ ಲಾಗುವುದು […]