ಇತ್ತೀಚಿನ ವರ್ಷಗಳಲ್ಲಿ ಜಾಗತಿಕವಾಗಿ ಮೂತ್ರಪಿಂಡ (Kidney Health) ಸಂಬಂಧಿ ಕಾಯಿಲೆಯನ್ನು ಹೊಂದಿರುವವರ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದೆ. 1990-2017: ಸಿಸ್ಟಮ್ಯಾಟಿಕ್ ಆನಲಿಸಿಸ್ ಫಾರ್ ದಿ ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಸ್ಟಡಿ 2017 ರ ಪ್ರಕಾರ, ಎಲ್ಲಾ ವಯಸ್ಸಿನವರಲ್ಲಿಯೂ ಕಿಡ್ನಿ ಸಮಸ್ಯೆಗಳು ಕಂಡುಬರುತ್ತಿದ್ದು, ಮರಣ ಪ್ರಮಾಣ ಶೇ.29.3 ರಿಂದ 49.3ರಷ್ಟು ಹೆಚ್ಚಾಗಿದೆ. ಮಿಲಿಯನ್ ಡೆತ್ ಸ್ಟಡಿ ಅಂದಾಜಿನ ಪ್ರಕಾರ ಭಾರತದಲ್ಲಿ ಮೂತ್ರಪಿಂಡ ವೈಫಲ್ಯದಿಂದ ಸಾವಿಗೀಡಾದವರ ಪ್ರಮಾಣ ಶೇ. 38 ರಷ್ಟು ಹೆಚ್ಚಳ ಕಂಡಿದೆ. ಈ ಕುರಿತ ಮಾಹಿತಿ ಇಲ್ಲಿದೆ.