ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹೀಗಾಗಿ ಅನಾರೋಗ್ಯ ಸಮಸ್ಯೆಗಳು ಬೇಗನೆ ಕಂಡುಬರುತ್ತವೆ. ಅವುಗಳಲ್ಲಿ ಸೋಂಕುಗಳ ತೀವ್ರತೆ ಹೆಚ್ಚಾಗಿದ್ದಲ್ಲಿ ಅವುಗಳ ಪರಿಣಾಮ ಕೂಡ ವಿಭಿನ್ನವಾಗಿರುತ್ತದೆ. ಹೀಗಾಗಿ ಮಗು ಅನಾರೋಗ್ಯಕ್ಕೆ ತುತ್ತಾದ ಬಳಿಕ ಆತಂಕಕ್ಕೆ ಒಳಪಡುವ ಬದಲು ರೋಗ ತಡೆಗಟ್ಟುವಿಕೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯವಶ್ಯಕ. ಇದಕ್ಕಾಗಿ ಚುಚ್ಚುಮದ್ದುಗಳು ಅಥವಾ ಲಸಿಕೆಗಳು (Vaccine for children) ಪ್ರಮುಖ ಪಾತ್ರವಹಿಸುತ್ತವೆ ಎಂದು ಬೆಂಗಳೂರಿನ ವಾಸವಿ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ. ಅಶೋಕ್ ಎಂ.ವಿ. ಹೇಳಿದ್ದಾರೆ.