ಮುಂಬೈ: ವಾಟ್ಸ್ ಆಪ್ ಸದಸ್ಯರ ಯಾವುದೇ ಆಕ್ಷೇಪಾರ್ಹ ಪೋಸ್ಟ್ ಗಳಿಗೆ ಗ್ರೂಪ್ ನ ನಿರ್ವಾಹಕರು(ಆಡ್ಮಿನ್) ಹೊಣೆಯಲ್ಲ ಎಂದು ಬಾಂಬೆ ಹೈಕೋರ್ಟ್ ನ ಪೀಠ ಮಹತ್ವದ ಆದೇಶ ಪ್ರಕಟಿಸಿದೆ. ಮಹಿಳೆಗೆ ಸಂಬಂಧಿಸಿದಂತೆ ವಾಟ್ಸ್ ಆಪ್ ಗ್ರೂಪ್ ಒಂದರ ಸದಸ್ಯರೊಬ್ಬರು ಆಕ್ಷೇಪಾರ್ಹವಾಗಿ ಪೋಸ್ಟ್ ನ್ನು ಹಾಕಿದ್ದರು. ಇದರ ವಿರುದ್ಧ ವಾಟ್ಸ್ ಆಪ್ ಗ್ರೂಪ್ ನ ನಿರ್ವಾಹಕ ಕಿಶೋರ್ ಟ್ಯಾರೋನ್ (33) ಎಂಬಾತನ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ಮಹಿಳೆಯೊಬ್ಬರು ದಾಖಲಿಸಿದ್ದರು. ಆಕ್ಷೇಪಾರ್ಹ ಪೋಸ್ಟ್ ನ್ನು ನಿರ್ವಾಹಕರು ಡಿಲೀಟ್ ಮಾಡಿಲ್ಲ ಹಾಗೂ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು […]