ಕೊಲ್ಹಾಪುರ: ಶುಕ್ರವಾರದ ಬೆಳಿಗ್ಗೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ‘ಮಹಾರಾಷ್ಟ್ರದ ಕೊಲ್ಹಾಪುರದಿಂದ ಪೂರ್ವಕ್ಕೆ 171 ಕಿಮೀ ದೂರದಲ್ಲಿ 3.9 ತೀವ್ರತೆಯ ಭೂಕಂಪ 10 ಕಿಮೀ ಆಳದಲ್ಲಿ ಸಂಭವಿಸಿದೆ’ ಎಂದು ಎನ್ಸಿಎಸ್ ಟ್ವೀಟ್ ಮಾಡಿದೆ. ಘಟನೆಯಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಇದಕ್ಕೂ ಮುನ್ನ ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ, ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್ಸಿಎಸ್ ಮಾಹಿತಿ ನೀಡಿದೆ.
ಮುಂಬೈ : ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಭಾನುವಾರ ಬೆಳಗ್ಗೆ ಭೂಕಂಪನ ಸಂಭವಿಸಿದೆ. ಕೊಲ್ಹಾಪುರದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.3 ತೀವ್ರತೆ ದಾಖಲಾಗಿದ್ದು, ಯಾವುದೇ ಸಾವು-ನೋವಿನ ಕುರಿತು ವರದಿಯಾಗಿಲ್ಲ. ಮಣಿಪುರದ...