ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ (KRS party) ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡ (Lingegowda) ಅವರು ಗುಜರಾತಿನಲ್ಲಿ ಪಾದಯಾತ್ರೆ ಸಂದರ್ಭ ನಡೆದ ಅಪಘಾತದಲ್ಲಿ (Road Accident) ನಿಧನರಾಗಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷರಾಗಿದ್ದ ಎಸ್.ಹೆಚ್. ಲಿಂಗೇಗೌಡ ಹಾಗೂ ಮಂಗಳೂರಿನ ಕುಂಜಿ ಮೂಸಾ ಕೂಡ ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವರು ಭಾಗಿಯಾಗಿದ್ದ ಪಾದಯಾತ್ರೆಯಲ್ಲಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಸಾವನ್ನಪ್ಪಿದ್ದಾರೆ. ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ […]