ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣ(2017) ದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಗಳ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಸೆಂಗರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಮುಕ್ತಾ ಗುಪ್ತಾ ಮತ್ತು ಪೂನಂ ಎ ಬಂಬಾ ಅವರ ಪೀಠವು ಜನವರಿ 27 ರಿಂದ ಫೆಬ್ರವರಿ 10 ರವರೆಗೆ ಕುಲದೀಪ್ ಸೆಂಗಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದೆ. ಬಿಡುಗಡೆಯ ಅವಧಿಯಲ್ಲಿ ಪ್ರತಿದಿನವೂ ಸಂಬಂಧಿತ ಎಸ್‌ಎಚ್‌ಒಗೆ […]