ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ (BJP State president) ಸ್ಥಾನ ಜನವರಿಯಲ್ಲಿ ಬದಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ (Kumar Bangarappa) ಬಾಂಬ್ ಸಿಡಿಸಿದ್ದಾರೆ. ಜೊತೆಗೆ, ನಾನು ಕೂಡ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಮನದಿಚ್ಛೆ ಹೊರಹಾಕಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷರು ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದರಿಂದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರ ಸ್ಥಾನ ಖಾಲಿಯಾಗುವ ನಿರೀಕ್ಷೆ ಇದೆ. ನಾನು […]