ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು ಇರಿಸಲಾಗಿದೆ. ಜತೆಗೆ ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭಿಸಲಾಗಿದೆ. ಹುಬ್ಬಳ್ಳಿ ಮತ್ತು ದಾವಣಗೆರೆ ಇಎಸ್ಐ ಆಸ್ಪತ್ರೆಗಳ ಬೆಡ್ 100ಕ್ಕೆ ಹೆಚ್ಚಳ ಯೆಲ್ಲೊ ಬೋರ್ಡ್ ಡ್ರೈವರ್ ಮಕ್ಕಳಿಗಾಗಿ ವಿದ್ಯಾನಿಧಿ ಸ್ಕೀಮ್ ಹಾಗೂ ಡ್ರೈವರ್ಸ್ ಮಕ್ಕಳ ಆರೋಗ್ಯ ಸೌಲಭ್ಯಕ್ಕೂ ವಿಶೇಷ ಯೋಜನೆಯನ್ನು ಘೋಷಿಸಲಾಗಿದೆ.