ನವದೆಹಲಿ: ಮಿಜೋರಾಂ ಮುಖ್ಯಮಂತ್ರಿಯಾಗಿ ಲಾಲ್ದುಹೋಮಾ ಅವರು ಡಿ.8ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಐಜ್ವಾಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಲಾಲ್ದುಹೋಮಾ ಅವರು ಇಂದು ರಾತ್ರಿ ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ. ಹೊಸ ಪ್ರಾದೇಶಿಕ ಪಕ್ಷ ಜೋರಂ ಪೀಪಲ್ಸ್ ಮೂವ್‌ಮೆಂಟ್ (ಝೆಡ್‌ಪಿಎಂ) ಮಿಜೋರಾಂ ವಿಧಾನಸಭೆಯಲ್ಲಿ 27 ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚನೆಯ ಹೊಸ್ತಿಲಿಗೆ ಬಂದು ನಿಂತಿದೆ. ಈ ಗೆಲುವಿನ ಮೂಲಕ ಝೆಡ್‌ಪಿಎಂ ಪಕ್ಷವು, ಸರ್ಕಾರ ರಚನೆಯಲ್ಲಿ ಮಿಜೊ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಮತ್ತು ಕಾಂಗ್ರೆಸ್ 1987ರಿಂದಲೂ ಹೊಂದಿದ್ದ ಪಾರಮ್ಯವನ್ನು […]