ಗಿರ್ ಸೋಮನಾಥ್: ಸೋಮನಾಥ ದೇಗುಲ ಟ್ರಸ್ಟ್ ಹಾಗೂ ರಾಜ್ಯ ಸರ್ಕಾರಕ್ಕೆ ಸೇರಿದ 3 ಹೆಕ್ಟೇರ್ ಜಮೀನಿನಲ್ಲಿ ಅತಿಕ್ರಮಣ ತೆರವುಗೊಳಿಸುವ ಬೃಹತ್ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಸೋಮನಾಥ ದೇಗುಲ ಟ್ರಸ್ಟ್ ಹಾಗೂ ಸರ್ಕಾರಕ್ಕೆ ಸೇರಿದ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 21 ಮನೆಗಳು ಹಾಗೂ 153 ಗುಡಿಸಲುಗಳನ್ನು ತೆರವುಗೊಳಿಸಲಾಗಿದೆ ಎಂದು ಕಲೆಕ್ಟರ್ ಹಾಜ್ರಿ ವಧ್‌ವನಿಯಾ ತಿಳಿಸಿದ್ದಾರೆ. ಐದು ಮಂದಿ ಮಾಮ್ಲತ್‌ದಾರ್ (ಸರ್ಕಾರದ ಗೆಜೆಟೆಡ್ ಅಧಿಕಾರಿ) ಹಾಗೂ 100 ಕಂದಾಯ ಅಧಿಕಾರಿಗಳ ಸಮ್ಮುಖದಲ್ಲಿ ಶನಿವಾರ ಈ ಕಾರ್ಯಾಚರಣೆ ಆರಂಭವಾಗಿದೆ. ಕಾರ್ಯಾಚರಣೆ ಸುಗಮವಾಗಿ […]