ಉತ್ತರ ಪ್ರದೇಶದ ನೋಯ್ಡಾದ ಮೊದಲ ಮಹಡಿಯಲ್ಲಿರುವ ತನ್ನ ಮನೆಯ ಬಾಲ್ಕನಿಯಲ್ಲಿ ಆಟವಾಡುತ್ತಿದ್ದ 3 ವರ್ಷದ ಮಗು ಆಯತಪ್ಪಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಮಗುವನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.