ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (J&K)ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ(LOC) ಉದ್ದಕ್ಕೂ ಉಗ್ರರ ನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನೆ(Indian army) ಶನಿವಾರ ವಿಫಲಗೊಳಿಸಿದೆ . ನುಸುಳುಕೋರರು ಗುಂಡಿನ ದಾಳಿ ನಡೆಸಿದ್ದರಿಂದ ಪ್ರತಿದಾಳಿ ನಡೆಸಿದ ಭಾರತೀಯ ಸೇನೆ ಒಬ್ಬ ನುಸುಳುಕೋರನ್ನು ಹೊಡೆದುರುಳಿಸಿದೆ. ದುರ್ಗಮ ಪ್ರದೇಶದಲ್ಲಿ ಕಾರ್ಯಚರಣೆ ನಡೆದಿದ್ದರಿಂದ ನುಸುಳುಕೋರನ ಶವ ಇನ್ನೂ ಪತ್ತೆಯಗಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ.