ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಹಲವು ತಂತ್ರಗಳನ್ನ ಹಾಕಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪರಸ್ಪರ ಶಾಲುಗಳನ್ನ ಹಾಕಿಕೊಂಡಿದ್ದಾರೆ. ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಜೊತೆಗಿನ ಮೈತ್ರಿಯಾದ ಬೆನ್ನಲ್ಲೇ ಕೇಸರಿ ಶಾಲನ್ನು ಹೆಗಲಿಗೆ ಹಾಕಿಕೊಂಡಿರುವುದು ರಾಜಕೀಯ ಪಡಸಾಲೆ ಹಾಗೂ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜ್ಯಕ್ಕೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು […]