ಜೈಪುರ: ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಮಾರ್ಬಲ್ ಸಾಗಿಸುತ್ತಿದ್ದ ಎಲ್‌ಪಿಜಿ ಟ್ಯಾಂಕರ್‌ಗೆ ಟ್ರಕ್ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟು, ಇನ್ನೊಬ್ಬರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ-8ರಲ್ಲಿ ಗುರುವಾರ ರಾತ್ರಿ ರಾಣಿ ಬಾಗ್ ರೆಸಾರ್ಟ್ ಬಳಿ ಅಪಘಾತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾ ಗಿದ್ದು. ಅಕ್ಕಪಕ್ಕದ ಅಂಗಡಿಗಳು ಮತ್ತು ಮನೆಗಳಿಗೆ ಬೆಂಕಿ ಆವರಿಸಿದ್ದು, ಭಾರೀ ಪ್ರಮಾಣದ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ. ‘ಅಪಘಾತದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಅಕ್ಕಪಕ್ಕದ ಅಂಗಡಿಗಳು ಮತ್ತು ನಿವಾಸಗಳು ಸಹ ಬೆಂಕಿಗೆ ಆಹುತಿಯಾಗಿವೆ’ […]