ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿನ ಒಪ್ಪಂದಗಳ ಫಲ; ₹23 ಸಾವಿರ ಕೋಟಿಗೂ ಹೆಚ್ಚಿನ ಬಂಡವಾಳ ಆಕರ್ಷಿಸುವಲ್ಲಿ ಕರ್ನಾಟಕ ಸಫಲ ಬೆಂಗಳೂರು: ‘ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆಗೆ ಮಾಡಿಕೊಂಡಿರುವ ಹಲವು ಒಪ್ಪಂದ ಗಳ ಫಲವಾಗಿ ಕರ್ನಾಟಕ ರಾಜ್ಯಕ್ಕೆ ₹ 23 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹರಿದು ಬರಲಿದೆ’ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ತಿಳಿಸಿದ್ದಾರೆ. ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ […]