ನವದೆಹಲಿ: ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆಯಪ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಎನ್‌ಸಿಆರ್, ಮುಂಬೈ ಮತ್ತು ಪಶ್ಚಿಮ ಬಂಗಾಳದ ಕೆಲವು ಸ್ಥಳಗಳಲ್ಲಿ ಬುಧವಾರ ಜಾರಿ ನಿರ್ದೇಶನಾಲಯವು 15 ಸ್ಥಳಗಳಲ್ಲಿ ದಾಳಿ ನಡೆಸಿದೆ. ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಅವರ ಆಪ್ತ ಸಹಾಯಕ ನಿತೀಶ್ ದಿವಾನ್ ಅವರನ್ನು ಫೆಡರಲ್ ಏಜೆನ್ಸಿ ಬಂಧಿಸಿದ ಸುಮಾರು 11 ದಿನಗಳ ನಂತರ ಈ ದಾಳಿಗಳು ನಡೆದಿವೆ. ಈ ಪ್ರಕರಣದಲ್ಲಿ ಛತ್ತೀಸ್‌ಗಢದ ಉನ್ನತ ಮಟ್ಟದ ರಾಜಕಾರಣಿಗಳು ಮತ್ತು ಅಧಿಕಾರಿಗಳು […]