ನವದೆಹಲಿ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಕೂಡಲೇ ರಾಜೀನಾಮೆ ನೀಡಬೇಕೆಂದು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ ಆಗ್ರಹಿಸಿದೆ. ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಮಾತನಾಡಿ, ಅನಿಲ್ ದೇಶ್ ಮುಖ್ ಅವರು ಕೂಡಲೇ ರಾಜೀನಾಮೆ ನೀಡಬೇಕು. ಉದ್ಯಮಿ ಯೊಬ್ಬರ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾಗಿರುವುದು ಗಂಭೀರವಾದ ವಿಚಾರ. ಪ್ರಕರಣ ಸಂಬಂಧ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ಪ್ರಕರಣ ಗಂಭೀರವಾಗಿರುವುದರಿಂದ ರಾಜ್ಯ ಸರ್ಕಾರ […]