ಬೆಂಗಳೂರು: ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಮಂಡ್ಯದಲ್ಲಿ ಜೂನ್ 7, 8 ಮತ್ತು 9ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಗ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. 87ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು. ಜಿಲ್ಲಾಡಳಿತದ ಸಹಕಾರದೊಂದಿಗೆ ಸಮ್ಮೇಳನ ಆಯೋಜಿಸಬೇಕು ಹಾಗೂ ಕನ್ನಡ ಸಂಘಟನೆಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು […]