ಮಂಗಳೂರು: ಅಯೋಧ್ಯೆಯಲ್ಲಿ ನಾಳೆ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಹಿನ್ನೆಲೆ ಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಲಾಗಿದೆ. ರಾಜ್ಯದಲ್ಲಿಯೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ಮೇರೆಗೆ ಪೊಲೀಸರು ಕಟ್ಟೆಚ್ಚರ ಕೈಗೊಂಡಿದ್ದಾರೆ. ಪ್ರಮುಖವಾಗಿ, ದಕ್ಷಿಣ ಕನ್ನಡ, ಮಂಗಳೂರಿನಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದು, ಸಾವಿರಾರು ಪೊಲೀಸರು ಭದ್ರತೆಗಾಗಿ ನಿಯೋಜನೆಗೊಂಡಿದ್ದಾರೆ. ಮಧ್ಯರಾತ್ರಿಯಿಂದ ಮಂಗಳೂರಿನಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಫ್ಲೆಕ್ಸ್, ಬಂಟಿಂಗ್ಸ್ ಗಳ ಮೇಲೆ ನಿಗಾ […]