ಕರುನಾಡ ಜನತೆಯಿಂದ ಬಿಜೆಪಿಗೆ ಭರ್ಜರಿ ಬಹುಮತ: ಅಸ್ಸಾಂ ಸಿಎಂ ಹಿಮಂತ್ ಬಿಸ್ವ ಶರ್ಮಾ ಮಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗಳಿಸಿ ಭರ್ಜರಿ ಬಹುಮತದಿಂದ ಗೆಲುವು ಸಾಧಿಸುವುದು ಖಚಿತ ಎಂದು ಅಸ್ಸಾಂ ಮುಖ್ಯ ಮಂತ್ರಿ ಹಿಮಂತ್ ಬಿಸ್ವ ಶರ್ಮಾ ಪ್ರತಿಪಾದಿಸಿದರು. ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ದೇಶದ ಆರ್ಥಿಕ, ಸಾಂಸ್ಕೃತಿಕ ಪ್ರಗತಿಗೆ ಕರ್ನಾಟಕದ ಕೊಡುಗೆಗಳು ಅಪಾರ. ಕಳೆದ ಒಂದು ವಾರದಿಂದ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಇಲ್ಲಿನ ಜನರ ಭಾವನೆಗಳು […]