ಮಂಗಳೂರು: ಮಂಗಳೂರಿನ ವಿಮಾನ ನಿಲ್ದಾಣದಲ್ಲಿ (Mangaluru International Airport) ರಾಮೇಶ್ವರಂ ಕೆಫೆ (Rameshwaram cafe) ಮಾದರಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ (Bomb hoax) ಕರೆ ಸಂದೇಶವೊಂದು ಬಂದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈ ಬಗ್ಗೆ ಬೆದರಿಕೆ ಸಂದೇಶ ಬಂದ ಬಗ್ಗೆ ತಡವಾಗಿ ವರದಿಯಾಗಿದೆ. ನ.30ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್ ಎನ್ನುವ ಹೆಸರಲ್ಲಿದ್ದ ಇಮೇಲ್‌ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜಪೆ ಠಾಣೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ […]