ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯ ಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಏ.18 ರವರೆಗೆ ವಿಸ್ತರಿಸಿದೆ. ಅವರನ್ನು ಬಿಡುಗಡೆ ಮಾಡಬೇಕು ಎಂಬ ಒತ್ತಡದ ನಡುವೆಯೂ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಮನೀಶ್ ಸಿಸೋಡಿಯಾ ಅವರನ್ನು ನ್ಯಾಯಾ ಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ಬಳಿಕ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ನ್ಯಾಯಾಂಗ […]