ಮಯೂರ್‌ಭಂಜ್: ಮಹಾರಾಜ ರಾಮಚಂದ್ರ ಭಂಜದೇಯೊ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಭಾಷಣ ಮಾಡು ತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕರೆಂಟ್ ಕೈಕೊಟ್ಟಿದೆ. ಇಡೀ ಸಭಾಂಗಣವೇ ಕತ್ತಲೆಯಲ್ಲಿ ಮುಳುಗಿ ಹೋಯಿತು. ವಿದ್ಯುತ್ ವ್ಯತ್ಯಯದಿಂದ ರಾಷ್ಟ್ರಪತಿಗಳ ಭಾಷಣಕ್ಕೆ ಅಡ್ಡಿಯಾಯಿತು. ಮಯೂರ್‌ಭಂಜ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೂರು ದಿನಗಳ ಪ್ರವಾಸ ಕೈಗೊಂಡಿದ್ದರು. ರಾಷ್ಟ್ರಪತಿಗಳು ಇಂದು ನಡೆದ ಮಹಾರಾಜ ಶ್ರೀರಾಮಚಂದ್ರ ಭಂಜಾ ದೇವು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿ ಸ್ಥಾನ ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟ್ರಪತಿಗಳು ಭಾಷಣ ಮಾಡುತ್ತಿದ್ದಾಗ […]