ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ ದೆಹಲಿ ಸಾಕೇತ್ ನ್ಯಾಯಾಲಯ ಐದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಪಾಟ್ಕರ್ ಅವರನ್ನು ಮಾನಹಾನಿ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಲಯವು, ಅವರ ಪ್ರತಿಷ್ಠೆಗೆ ಉಂಟಾದ ಹಾನಿಗಾಗಿ ಸಕ್ಸೇನಾ ಅವರಿಗೆ 10 ಲಕ್ಷ ರೂ.ಗಳ ಪರಿಹಾರವನ್ನು ನೀಡುವಂತೆ ನಿರ್ದೇಶಿಸಿತು. ಆದಾಗ್ಯೂ, ನ್ಯಾಯಾಲಯವು ಆಗಸ್ಟ್ 1 ರವರೆಗೆ ಶಿಕ್ಷೆಯನ್ನು ಅಮಾನತುಗೊಳಿಸಿತು.