ಮಿಜೋರಾಂ: ಮಿಜೋರಾಂ ಪೀಪಲ್ಸ್ ಮೂವ್‌ಮೆಂಟ್ (ZPM) ನಾಯಕ ಲಾಲ್ದುಹೋಮಾ (73) ಶುಕ್ರವಾರ ಮಿಜೋರಾಂನ ಹೊಸ ಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಪಕ್ಷದ ಹಲವು ನಾಯಕರು ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಝಡ್ಪಿಎಂ ಇತ್ತೀಚೆಗೆ ನಡೆದ ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಂಎನ್ಎಫ್ ಸೋಲಿಸುವ ಮೂಲಕ ಅಧಿಕಾರಕ್ಕೆ ಬಂದಿತು. ಫಲಿತಾಂಶ ಹೊರ ಬೀಳುತ್ತಿದ್ದಂತೆ ಜ್ವಾಲ್‌ನ ರಾಜಭವನದಲ್ಲಿ ರಾಜ್ಯಪಾಲ ಹರಿಬಾಬು ಕಂಬಂಪತಿ ಅವರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆಗೆ ಲಾಲ್ದುಹೋಮಾ ಹಕ್ಕು ಮಂಡಿಸಿದ್ದರು.