ಹರಪನಹಳ್ಳಿ: ಕ್ಷೇತ್ರದ ಶಾಸಕ ಜಿ.ಕರುಣಾಕರರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ತಾಲೂಕಿನ ನೀಲಗುಂದ ಗ್ರಾಮದ ಗುಡ್ಡದ ಜಂಗಮ ಸಂಸ್ಥಾನ ಪೀಠದ ಚನ್ನಬಸವ ಶಿವಯೋಗಿ ಶ್ರೀಗಳು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಶ್ರೀಗಳು ನಂಜುಂಡಪ್ಪ ವರದಿಯಲ್ಲಿ ಹೇಳಿರುವಂತೆ ಹರಪನಹಳ್ಳಿ ತಾಲೂಕು ಅತೀ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ಹೊತ್ತಿದ್ದು, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಮಾ ಜಿಕವಾಗಿ ಸೇರಿದಂತೆ ಈ ಕ್ಷೇತ್ರ ಸರ್ವಾಂಗೀಣವಾಗಿ ಅಭಿವೃದ್ಧಿ ಹೊಂದಬೇಕಾದರೆ ಶಾಸಕ ಜಿ.ಕರುಣಾಕರ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕು […]