ನವದೆಹಲಿ: ಜ.ಎಂ.ಎಂ.ನರವಣೆ ಅವರು ಭಾರತೀಯ ಸೇನಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥ ಹುದ್ದೆಯಾದ ಚೀಫ್ ಆಫ್ ಸ್ಟಾಫ್ ಕಮಿಟಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಅಧಿಕಾರ ವಹಿಸಿಕೊಂಡಿದ್ದಾರೆ. ಜ.ಬಿಪಿನ್ ರಾವತ್ ಸಾವಿನ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನರವಣೆ ಅವರನ್ನು ನೇಮಕ ಮಾಡಲಾಗಿದೆ. ಸಶಸ್ತ್ರ ಪಡೆಗಳ ಮುಖ್ಯಸ್ಥ ಹುದ್ದೆ ಸೃಷ್ಟಿಗೂ ಮುನ್ನ ಈ ಹುದ್ದೆ ಇತ್ತು. ಸೇನೆ, ನೌಕಾಪಡೆ ಮತ್ತು ವಾಯಪಡೆಯ ಮುಖ್ಯಸ್ಥರ ಪೈಕಿ ಅತ್ಯಂತ ಹಿರಿಯರು ಚೀಫ್ ಆಫ್ ಸ್ಟಾಫ್ ಕಮಿಟಿ ಅಧ್ಯಕ್ಷರಾಗಿ ನಿಯುಕ್ತಿಗೊಳ್ಳುತ್ತಿದ್ದರು. ಈ ಹಿಂದೆ ಬಿಪಿನ್ […]