ನವದೆಹಲಿ : ಭಾರತದಿಂದ 2022-23ರಲ್ಲಿ ಒಟ್ಟು 85,000 ಕೋಟಿ ರೂ. ಮೌಲ್ಯದ ಮೊಬೈಲ್ ಹ್ಯಾಂಡ್‌ಸೆಟ್ ರಫ್ತಾಗಿದೆ ಎಂದು ಇಂಡಿಯಾ ಸೆಲ್ಯುಲಾರ್ & ಎಲೆಕ್ಟ್ರಾನಿಕ್ಸ್ ಅಸೋಸಿಯೇಶನ್‌ನ ಅಂಕಿ ಅಂಶಗಳು ತಿಳಿಸಿವೆ. 2021-22ರ ಸಾಲಿನಲ್ಲಿ 46,980 ಕೋಟಿ ರೂ. ಮೌಲ್ಯದ ಮೊಬೈಲ್ ಹ್ಯಾಂಡ್‌ಸೆಟ್ ರಫ್ತಾಗಿತ್ತು. ಸ್ಥಳೀಯವಾಗಿ ಮೊಬೈಲ್ ಫೋನ್ ಉತ್ಪಾದನೆಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಉಪಕ್ರಮಗಳು ಫಲ ನೀಡುತ್ತಿವೆ. ಆಯಪಲ್‌ನ ಉತ್ಪಾದನೆಯಲ್ಲಿ ಉಂಟಾಗಿರುವ ಹೆಚ್ಚಳ, ಸ್ಯಾಮ್‌ಸಂಗ್ ಸೇರಿದಂತೆ ಇತರ ಕಂಪನಿಗಳೂ ಹ್ಯಾಂಡ್ ಸೆಟ್ ಉತ್ಪಾದನೆಯನ್ನು ಹೆಚ್ಚಿಸುತ್ತಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. […]