ನವದೆಹಲಿ: ಮಣಿಪುರ ಹಿಂಸಾಚಾರದ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ಮೈತ್ರಿಕೂಟ INDIA, ಈಗ ಲೋಕಸಭೆ ಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಯಿದೆ ಎಂದು ಮೂಲಗಳು ತಿಳಿಸಿವೆ. ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಒಳಗೊಂಡ ಮೈತ್ರಿಕೂಟ(ಇಂಡಿಯಾ)ದ ಸಭೆ ಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಚರ್ಚಿಸಲಾಗಿದೆ. ಮಣಿಪುರ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ಪ್ರಾರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಇದು ಪರಿಣಾಮಕಾರಿ ಮಾರ್ಗ ಎಂದು ವಿವಿಧ ಪಕ್ಷಗಳು ಹೇಳಿದ ನಂತರ […]