ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನ ಟೀಕಿಸಿದ್ದನ್ನು ಎದುರಿಸಲು ಭಾರತೀಯ ಜನತಾ ಪಕ್ಷ ಸೋಮವಾರ ‘ಮೋದಿ ಕಾ ಪರಿವಾರ್’ ಎಂಬ ಪ್ರಮುಖ ಆನ್ಲೈನ್ ಅಭಿಯಾನ ಪ್ರಾರಂಭಿಸಿದೆ. ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಸೇರಿದಂತೆ ಹಲವಾರು ಉನ್ನತ ನಾಯಕರು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲುಗಳಲ್ಲಿ ಮೋದಿಯವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ, ಅನುರಾಗ್ ಠಾಕೂರ್, ರಾಜನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ […]