ಬೆಂಗಳೂರು: ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ. ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ […]