ಲಕ್ನೋ: ಉತ್ತರಪ್ರದೇಶದ 5 ಬಾರಿಯ ಶಾಸಕ, ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ (60) ಸಾವಿನ ಕುರಿತು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಅನುಮಾನ ವ್ಯಕ್ತ ಪಡಿಸಿದ್ದು, ಸೂಕ್ತ ತನಿಖೆ ನಡೆಯಬೇಕೆಂದು ಒತ್ತಾಯಿಸಿವೆ. 8 ಪ್ರಕರಣಗಳಲ್ಲಿ ದೋಷಿ ಎಂದು ಸಾಬೀತಾಗಿ 2005 ರಿಂದಲೂ ಜೈಲಲ್ಲಿದ್ದ ಅನ್ಸಾರಿ, ಗುರುವಾರ ಸಂಜೆ ರಂಜಾನ್ ಉಪವಾಸ ಮುರಿಯು ತ್ತಿದ್ದಂತೆ ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಹೃದಯಾಘಾತದಿಂದ ಕೊನೆಯುಸಿರೆಳೆದರು. ಮಂಗಳವಾರವಷ್ಟೇ ಕಿಬ್ಬೊಟ್ಟೆ ನೋವಿನ ಕಾರಣ 14 ಗಂಟೆ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದರು. […]
ನವದೆಹಲಿ: ನಕಲಿ ಶಸ್ತ್ರಾಸ್ತ್ರ ಪರವಾನಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ ಮುಖ್ತಾರ್ ಅನ್ಸಾರಿಗೆ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಮಂಗಳವಾರ ಅನ್ಸಾರಿಯನ್ನ ದೋಷಿ ಎಂದು ಘೋಷಿಸಿತ್ತು ಮತ್ತು...