ನವದಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2022-23ರ ರಣಜಿ ಟ್ರೋಫಿ ಋತುವಿನ ಪಂದ್ಯದಲ್ಲಿ ದೆಹಲಿ ತಂಡವು 43 ವರ್ಷಗಳ ನಂತರ ಮೊದಲ ಬಾರಿಗೆ ಮುಂಬೈ ತಂಡವನ್ನು ಸೋಲಿಸಿ ಇತಿಹಾಸ ನಿರ್ಮಿಸಿತು. ಮುಂಬೈ ವಿರುದ್ಧದ ಪಂದ್ಯಕ್ಕೂ ಮುನ್ನ ಆಡಿದ ಐದು ಪಂದ್ಯಗಳಲ್ಲಿ ದೆಹಲಿ ತಂಡ ಯಾವುದೇ ಪಂದ್ಯವನ್ನು ಗೆದ್ದಿರಲಿಲ್ಲ. 2 ಪಂದ್ಯಗಳಲ್ಲಿ ಸೋಲನು ಭವಿಸಿದ್ದರೆ, 3 ಪಂದ್ಯಗಳು ಡ್ರಾನಲ್ಲಿ ಅಂತ್ಯ ಕಂಡಿದ್ದವು. ಪೃಥ್ವಿ ಶಾ, ಸರ್ಫರಾಜ್ ಖಾನ್, ನಾಯಕ ಅಜಿಂಕ್ಯಾ ರಹಾನೆ ಅವರಂತಹ ಸ್ಟಾರ್ ಆಟಗಾರರನ್ನು ಒಳಗೊಂಡಿದ್ದ ಹೊರತಾಗಿಯೂ […]