ಮಸೂರಿ: ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಉತ್ತರಾಖಂಡ ರಾಜ್ಯದ ಮಸೂರಿಯಲ್ಲಿ ಭಾನುವಾರ ನಡೆದಿದೆ. ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಹತ್ತಿಕೊಂಡಿದೆ ಎಂದು ವರದಿಯಾಗಿದೆ. ಕ್ಯಾಮಲ್ಸ್ ಬ್ಯಾಕ್ ರೋಡ್ ನಲ್ಲಿರುವ ಸಿಧುಸ್ ರಿಂಕ್ ಹೋಟೆಲ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಮಧ್ಯರಾತ್ರಿ ನಡೆದ ದುರ್ಘಟನೆಯಲ್ಲಿ ಹೋಟೆಲ್ ನಲ್ಲಿ ಪಾರ್ಕ್ ಮಾಡಿದ್ದ ಎರಡು ಕಾರುಗಳು ಸುಟ್ಟು ಕರಕಲಾಗಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಅವಘಡ ಸಂಭವಿಸಿದಾಗ ಹೋಟೆಲ್‌ನಲ್ಲಿ ಪುನರ್ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಎಂದು […]