ಕಠ್ಮಂಡು: 19 ಪ್ರಯಾಣಿಕರನ್ನು ಹೊತ್ತ ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವು ಟೇಕ್ ಆಫ್ ಆಗುವ ವೇಳೆ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಅಪಘಾತಕ್ಕೀಡಾಗಿದೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಪಘಾತಕ್ಕೀಡಾದ ಪೊಖಾರಾಗೆ ತೆರಳುತ್ತಿದ್ದ ಸೌರ್ಯ ಏರ್ಲೈನ್ಸ್ ವಿಮಾನದಲ್ಲಿ ಏರ್ಕ್ರೂ ಸೇರಿದಂತೆ ಕನಿಷ್ಠ 19 ಜನರು ಸಜೀವ ದಹನವಾಗಿದ್ದಾರೆ ಎಂದು ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾದ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಮಾನದಿಂದ ಸಂಭವಿಸಿದ ಬೆಂಕಿಯನ್ನು ನಂದಿಸಲಾಗಿದೆ ಎಂದು ಹೇಳಿದರು. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಅಪಘಾತದ […]