ಬೆಂಗಳೂರು: ಪ್ರಧಾನಿಯಾಗಿ ನರೇಂದ್ರ ಮೋದಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಧಾನಿ ಮೋದಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ದೇವೇಗೌಡ ಅವರು ಅದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ʼʼನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾನ ವಚನ ಸ್ವೀಕರಿಸುತ್ತಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತಿದ್ದೇನೆ. ಅನಾರೋಗ್ಯದ ಕಾರಣದಿಂದ ನನಗೆ ಈ ಕಾರ್ಯಕ್ರಮದಲ್ಲಿ ಭಾವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ […]