ಕೋಲಾರ: ನಾಲ್ಕು ತಿಂಗಳಲ್ಲಿ ಎನ್‌ಡಿಎ ಸರಕಾರ ಪತನ ಆಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೊಸ ಬಾಂಬ್ ಸಿಡಿಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಾರ್ಜ್, ದೇಶದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗ್ತಾರೆ. ದೇಶದಲ್ಲಿ ಪ್ರಧಾನಿ ಮೋದಿ ಮೋಡಿ ಮಾಡಲಿಲ್ಲ. ಇದಕ್ಕೆ ಇಂಬು ನೀಡುವಂತೆ ಲೋಕಸಭೆ ಚುನಾವಣೆಯಲ್ಲಿ ಜನ ಪಾಠ ಕಲಿಸಿದ್ದಾರೆ ಎಂದು ಹೇಳಿದರು.