ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದ ಸ್ಮರಣೆ ಆಚರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ‘ಜನವರಿ 23ರಿಂದ ಪ್ರಾರಂಭವಾಗುವ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ, ನಡೆಯಲಿರುವ ಚಟುವಟಿಕೆಗಳನ್ನು ಈ ಸಮಿತಿಯೇ ನಿರ್ಧರಿಸಲಿದೆ’ ಎಂದು ಸಂಸ್ಕೃತಿ ಸಚಿವಾಲಯದ ಪ್ರಕಟಣೆ ಹೇಳಿದೆ. ಸಮಿತಿಯು ವಿಶೇಷ ನಾಗರಿಕರು, ಇತಿಹಾಸಕಾರರು, ಲೇಖಕರು, ತಜ್ಞರು, ಸುಭಾಷ್ ಚಂದ್ರ ಬೋಸ್ ಅವರ ಕುಟುಂಬದ ಸದಸ್ಯರು ಮತ್ತು ಆಜಾದ್ ಹಿಂದ್ ಫೌಜ್‌ಗೆ (ಐಎನ್‌ಎ) ಸಂಬಂಧಿಸಿದ ಪ್ರಖ್ಯಾತ ವ್ಯಕ್ತಿಗಳನ್ನು ಒಳಗೊಂಡಿದೆ. ‘ದೆಹಲಿ, […]