ನವದೆಹಲಿ: ಇಡೀ ಪರೀಕ್ಷಾ ವ್ಯವಸ್ಥೆಯನ್ನು ಶ್ರೀಮಂತ ಮಕ್ಕಳ ವಾಣಿಜ್ಯ ಉದ್ಯಮವಾಗಿ ಪರಿವರ್ತಿಸಲಾಗಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಸೋಮವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. “ನೀಟ್ ವೃತ್ತಿಪರ ಪರೀಕ್ಷೆಯಲ್ಲ. ನೀಟ್ ಒಂದು ವಾಣಿಜ್ಯ ಪರೀಕ್ಷೆಯಾಗಿದೆ. ನೀಟ್ನಲ್ಲಿ, ಒಬ್ಬ ವಿದ್ಯಾರ್ಥಿ ಟಾಪರ್ ಅಥವಾ ಅತ್ಯುತ್ತಮ ವಿದ್ಯಾರ್ಥಿಯಾಗ ಬಹುದು, ಆದರೆ ಅವರ ಬಳಿ ಹಣವಿಲ್ಲದಿದ್ದರೆ ವೈದ್ಯಕೀಯ ಕಾಲೇಜಿಗೆ ಹೋಗಲು ಸಾಧ್ಯವಿಲ್ಲ. ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಂಕಗಳು ಶೇ.20-22 ರಷ್ಟಿದೆ. ಇಡೀ ಪರೀಕ್ಷೆಯನ್ನು ಶ್ರೀಮಂತ ಮಕ್ಕಳಿಗಾಗಿ ವಿನ್ಯಾಸಗೊಳಿಸಲಾಗಿದೆ” ಎಂದು ಹೇಳಿದರು. […]