ನವದೆಹಲಿ: ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಕಟ್ಟಡದಲ್ಲಿ ಬೆಂಕಿ ಕಾಣಿಸಿ ಕೊಂಡು 26 ಮಂದಿ ದುರ್ಮರಣಕ್ಕೀಡಾಗಿ, ಇಬ್ಬರು ಗಾಯಗೊಂಡಿದ್ದಾರೆ. ದೆಹಲಿಯ ಮುಂಡ್ಕಾ ಪ್ರದೇಶದ ಮೂರು ಅಂತಸ್ತಿನ ಕಟ್ಟಡದಲ್ಲಿ ದಿಢೀರ್ ಬೆಂಕಿ ಹೊತ್ತಿ ಕೊಂಡಿದ್ದು, ಈ ವೇಳೆ 16 ಜನರು ಮೃತಪಟ್ಟಿ ದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಟ್ಟಡದಲ್ಲಿ ಬೆಂಕಿ ತಗುಲಿರುವ ಕರೆ ಬಂದಿದ್ದು, ತಕ್ಷಣವೇ ಸ್ಥಳಕ್ಕೆ ದೌಡಾಯಿಸಲಾಗಿದೆ. ಎರಡು ಮಹಡಿಯಲ್ಲಿ ಬೆಂಕಿ ಆವರಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದಿದ್ದಾರೆ. ಕಟ್ಟಡದೊಳಗೆ […]