ನವದೆಹಲಿ: ಹಿಟ್ & ರನ್ ಪ್ರಕರಣಕ್ಕೆ ಸಂಬಂಧಿಸಿದ ನೂತನ ಕಾನೂನು ವಿರೋಧಿಸಿ ವಿವಿಧ ರಾಜ್ಯಗಳಲ್ಲಿ ಲಾರಿ ಚಾಲಕರು ಮಂಗಳವಾರ ಮುಷ್ಕರ ನಡೆಸುತ್ತಿದ್ದಾರೆ. ಪ್ರತಿಭಟನೆ ತೀವ್ರಗೊಂಡರೆ ಇಂಧನ ಸರಬರಾಜು ಮೇಲೆ ಪರಿಣಾಮ ಬೀರಬಹುದೆಂಬ ಭೀತಿಯಿಂದಾಗಿ ಮಹಾರಾಷ್ಟ್ರ, ಛತ್ತೀಸ್ ಗಢ, ಮಧ್ಯಪ್ರದೇಶ ದಲ್ಲಿ ನೂರಾರು ಜನರು ಪೆಟ್ರೋಲ್ ಬಂಕ್ ಬಳಿ ಜಮಾಯಿಸಿರುವುದಾಗಿ ವರದಿ ತಿಳಿಸಿದೆ. ಬ್ರಿಟಿಷ್ ಕಾಲದ ಇಂಡಿಯನ್ ಪೀನಲ್ ಕೋಡ್ ಅನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ್ದು, ನೂತನ ಕಾಯ್ದೆಯ ಪ್ರಕಾರ, ಹಿಟ್ ಆಂಡ್ ರನ್ ಕೇಸ್ ನಲ್ಲಿ ಆರೋಪಿ […]