ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ)ವು ಗುರುವಾರ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸ್ವತಂತ್ರ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಮುಖ್ಯಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮ ವನ್ನುದ್ದೇಶಿಸಿ ಮಾತನಾಡಿ, ವೇದಗಳ ಕಾಲದಿಂದಲೂ ದೇಶದಲ್ಲಿ ಮಾನವ ಹಕ್ಕುಗಳು ಅಸ್ತಿತ್ವದಲ್ಲಿದೆ ಎಂದು ಹೇಳಿದರು.