ಪಶ್ಚಿಮ ಬಂಗಾಳ: ತನಿಖೆಗೆ ತೆರಳಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮೇಲೆ ಇಟ್ಟಿಗೆ, ಕಲ್ಲುಗಳಿಂದ ದಾಳಿ ನಡೆದಿ ರುವ ಘಟನೆ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದಲ್ಲಿ ಜರುಗಿದೆ. ತೃಣಮೂಲ ಕಾಂಗ್ರೆಸ್ ಮುಖಂಡರ ಮನೆಯಲ್ಲಿ 2022ರಲ್ಲಿ ನಡೆದ ಸ್ಫೋಟ ಪ್ರಕರಣದ ತನಿಖೆಗಾಗಿ ಎನ್‌ಐಎ ತಂಡ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಗೆ ತಲುಪಿತ್ತು. ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ಶನಿವಾರ ಬೆಳಗ್ಗೆ ಎನ್‌ಐಎ ತಂಡ ತಲುಪುತ್ತಿದ್ದಂತೆ ಅವರ ಕಾರುಗಳ ಮೇಲೆ ಕಲ್ಲು, ಇಟ್ಟಿಗೆಗಳನ್ನು ಎಸೆಯಲಾಗಿದೆ. ಅಧಿಕಾರಿಗಳ ಕಾರಿನ ಗ್ಲಾಸುಗಳು ಒಡೆದಿವೆ. […]