ಬೆಂಗಳೂರು: 108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಕಾರಣಕ್ಕೆ ನಾಳೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಆಂಬ್ಯುಲೆನ್ಸ್ ಸೇವೆ ಬಂದ್ ಮಾಡಿ ಮುಷ್ಕರ ಮಾಡುತ್ತಿದ್ದಾರೆ. ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿ ತಿರುಗಿ ಬಿದ್ದಿದ್ದಾರೆ. ಮೂರು ತಿಂಗಳಿಂದ ವೇತನ ಸಿಗದೆ 108 ಸಿಬ್ಬಂದಿಗಳಿಗೆ ಜೀವನ ನಡೆಸಲು ಕಷ್ಟವಾಗುತ್ತಿದ್ದು, ಒಂದು ಕಡೆ ಮೂರು ತಿಂಗಳಿಂದ ಸಂಬಳವಿಲ್ಲ. ಮತ್ತೊಂದು ಕಡೆ ಜಿವಿಕೆ ಸಂಸ್ಥೆ ವೇತನ ಕಡಿತಗೊಳಿಸಿದೆ ಎಂದು ಕಿಡಿಕಾರಿದ್ದಾರೆ. ಈ ಎಲ್ಲ […]